Subscribe Now

Edit Template

Subscribe Now

Edit Template

ಮಹಾರಾಷ್ಟ್ರದಿಂದ ರಾಜ್ಯಕ್ಕೆ ಬರುವ ಐಟಿ ಕಂಪೆನಿಗಳಿಗೆ ಮುಕ್ತ ಸ್ವಾಗತ: ಡಿಸಿಎಂ ಡಿ.ಕೆ.ಶಿವಕುಮಾರ್

ಬಿಜೆಪಿ ಮತಗಳ್ಳತನ ಜನರ ಗಮನಕ್ಕೆ ತರಬೇಕು

ಹನಿಟ್ರ್ಯಾಪ್ ತನಿಖೆ ನನಗೆ ಏನೂ ಗೊತ್ತಿಲ್ಲ

ಬೆಂಗಳೂರು, ಜು.31:

“ಮಹಾರಾಷ್ಟ್ರದಿಂದ ರಾಜ್ಯಕ್ಕೆ ವಲಸೆ ಬರುವ ಐಟಿ ಕಂಪನಿಗಳನ್ನು ನಾವು ಸ್ವಾಗತಿಸುತ್ತೇವೆ. ನಾವು ಈ ಕಂಪನಿಗಳಿಗೆ ತಂತ್ರಜ್ಞಾನ, ವಿದ್ಯುತ್ ಸೇರಿದಂತೆ ಎಲ್ಲಾ ಮೂಲ ಸೌಲಭ್ಯಗಳನ್ನು ಒದಗಿಸಲು ತಯಾರಿದ್ದೇವೆ” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಹೇಳಿದರು.

ನಗರದ ಮಾನ್ಯತಾ ಟೆಕ್ ಪಾರ್ಕಿನಲ್ಲಿರುವ ಖಾಸಗಿ ಹೋಟೆಲ್ ನಲ್ಲಿ ನಡೆದ ಕ್ವಾಂಟಮ್ ಶೃಂಗಸಭೆಯ ನಂತರ ಶಿವಕುಮಾರ್ ಅವರು ಮಾಧ್ಯಮಗಳ ಪ್ರಶ್ನೆಗಳಿಗೆ ಗುರುವಾರ ಉತ್ತರಿಸಿದರು.

“ನಾಲ್ಕು ದಿನಗಳ ಹಿಂದೆ ಮಹರಾಷ್ಟ್ರದ ಉಪಮುಖ್ಯಮಂತ್ರಿಯವರು ಪುಣೆಯಿಂದ ಬೆಂಗಳೂರಿಗೆ ಐಟಿ ಕಂಪೆನಿಗಳು ಹೋಗುತ್ತಿವೆ ಎಂದು ಹೇಳಿಕೆ ನೀಡಿದ್ದರು. ಅವರಿಗೆ ನಾನು ಧನ್ಯವಾದಗಳನ್ನು ತಿಳಿಸುತ್ತಿದ್ದೇನೆ. ನಾವು ದೇಶದ ಇತರೆ ರಾಜ್ಯಗಳ ಜೊತೆ ಸ್ಪರ್ಧಿಸುತ್ತಿಲ್ಲ ಬದಲಾಗಿ ಜಾಗತಿಕ ಮಟ್ಟದಲ್ಲಿ ಸ್ಪರ್ಧಿಸುತ್ತಿದ್ದೇವೆ” ಎಂದರು.

“ಮಹಾರಾಷ್ಟ್ರವೂ ಸಹ ಐಟಿ ಕ್ಷೇತ್ರದಲ್ಲಿ ಸಾಕಷ್ಟು ಮುಂದುವರೆದಿರುವ ರಾಜ್ಯ. ಅಲ್ಲಿನ ಐಟಿ ಹಬ್ ಪುಣೆಯ ಹಿಂಜವಾಡಿಯು ಅತ್ಯಂತ ಪ್ರಮುಖ ಐಟಿ ಪ್ರದೇಶ. ಆದರೆ ನಮ್ಮ ರಾಜ್ಯಕ್ಕೆ ಬರುವ ಕಂಪನಿಗಳನ್ನು ನಾವು ಮುಕ್ತವಾಗಿ ಸ್ವಾಗತಿಸಿ ಬೆಂಬಲಿಸುತ್ತೇವೆ” ಎಂದರು.

ಬಿಜೆಪಿ ಮತಗಳ್ಳತನ ಜನರ ಗಮನಕ್ಕೆ ತರಬೇಕು

ಮತಗಳ್ಳತನದ ವಿರುದ್ದ ಪ್ರತಿಭಟನೆ ನಗರದ ಒಳಗೆ ಹಮ್ಮಿಕೊಂಡಿರುವ ಬಗ್ಗೆ ಟೀಕೆ ವ್ಯಕ್ತವಾಗುತ್ತಿರುವ ಬಗ್ಗೆ ಕೇಳಿದಾಗ, “ನಮ್ಮ ರಾಜಕೀಯ ನಿಲುವಿನ ಬಗ್ಗೆ ಬೇರೆಯವರಿಗೆ ಏಕೆ ಇರುಸು ಮುರುಸಾಗುತ್ತಿದೆ. ನಾವು ಏಕೆ ಬೇರೆಯವರಿಗೆ ಇದರ ಬಗ್ಗೆ ಉತ್ತರಿಸಬೇಕು. ನಾವು ಕರ್ನಾಟಕದ ಜನರಿಗೆ ಉತ್ತರದಾಯಿಗಳು. ಬಿಜೆಪಿಯವರು ವಿಧಾನಸಭಾ ಚುನಾವಣೆ ವೇಳೆ ಚಿಲುಮೆ ಸಂಸ್ಥೆ ಬಳಸಿಕೊಂಡು ಅಕ್ರಮ ಎಸಗಿದರು. ನಮ್ಮ ನಾಯಕರು ಇದರ ಬಗ್ಗೆ ಮಾತನಾಡುತ್ತಾರೆ. ಈ ವಿಚಾರದಲ್ಲಿ ತನಿಖೆ ನಡೆಸಿಯೇ ನಮ್ಮ ನಾಯಕರು ಮಾತನಾಡುತ್ತಿದ್ದಾರೆ. ರಾಹುಲ್ ಗಾಂಧಿ ಅವರು ರಾಜಕೀಯ ಉದ್ದೇಶಕ್ಕೆ ರಾಜ್ಯಕ್ಕೆ ಬರುತ್ತಿಲ್ಲ. ಬದಲಾಗಿ ಜನರನ್ನು ಎಚ್ಚರಗೊಳಿಸಲು ಬರುತ್ತಿದ್ದಾರೆ. ನಮಗೆ ಪ್ರಜಾಪ್ರಭುತ್ವ ಉಳಿಯಬೇಕು. ಚುನಾವಣಾ ಆಯೋಗ ರಾಜಕೀಯ ಪಕ್ಷದ ಭಾಗವಾಗುವುದನ್ನು ತಪ್ಪಿಸಬೇಕು” ಎಂದರು.

ರಾಹುಲ್ ಗಾಂಧಿ ಅವರ ಕಾರ್ಯಕ್ರಮದ ಬಗ್ಗೆ ಕೇಳಿದಾಗ, “ಬಿಜೆಪಿ ಮತಗಳ್ಳತನ ನಡೆಸಿದೆ ಎಂಬುದನ್ನು ಜನರ ಗಮನಕ್ಕೆ ತರಬೇಕು ಎಂಬುದು ನಮ್ಮ ಉದ್ದೇಶ. ಬಿಜೆಪಿ ಮತಗಳ್ಳತನದ ಬಗ್ಗೆ ಪ್ರತಿಭಟನಾ ಸಭೆ ಅಥವಾ ರ್ಯಾಲಿ ಮಾಡಬೇಕೆ ಎನ್ನುವುದನ್ನು ಪಕ್ಷದ ಪ್ರಧಾನ ಕಾರ್ಯದರ್ಶಿಗಳ ಸಭೆಯಲ್ಲಿ ತೀರ್ಮಾನಿಸಲಾಗುವುದು” ಎಂದು ಹೇಳಿದರು.

“ಚುನಾವಣಾ ಆಯೋಗವನ್ನು ದುರುಪಯೋಗ ಪಡಿಸಿಕೊಂಡು ನಮ್ಮ ರಾಜ್ಯ ಹಾಗೂ ದೇಶದಲ್ಲಿ ಬಿಜೆಪಿಯವರು ಚುನಾವಣಾ ಅಕ್ರಮ ಎಗಸಿರುವುದನ್ನು ಬೆಳಕಿಗೆ ತರಬೇಕು. ಈ ಬಗ್ಗೆ ಪಕ್ಷದಿಂದಲೂ ಸಂಶೋಧನೆ ನಡೆದಿದೆ. ಆದರೆ ಜನ ಸೇರುವುದರ ಕುರಿತು ನ್ಯಾಯಲಯದ ನಿರ್ದೇಶನ ಹಾಗೂ ಸರ್ಕಾರದ ಮಾರ್ಗಸೂಚಿಗಳು ಇರುವ ಕಾರಣಕ್ಕೆ ಪ್ರತಿಭಟನೆಯ ಸ್ವರೂಪವನ್ನು ಚರ್ಚೆ ಮಾಡಲಾಗುವುದು” ಎಂದರು.

ಹನಿಟ್ರ್ಯಾಪ್ ತನಿಖೆ ನನಗೆ ಏನೂ ಗೊತ್ತಿಲ್ಲ

ರಾಜಣ್ಣ ಅವರ ಹನಿಟ್ಯ್ರಾಪ್ ವಿಚಾರದಲ್ಲಿ ಸಾಕ್ಷ್ಯಗಳಿಲ್ಲ ಎನ್ನುವ ಸಿಐಡಿ ವರದಿಯ ಬಗ್ಗೆ ಕೇಳಿದಾಗ, “ನನಗೂ ಇದಕ್ಕೂ ಏನು ಸಂಬಂಧ. ಯಾರು ದೂರು ನೀಡಿದ್ದು ಗೊತ್ತಿಲ್ಲ, ತನಿಖೆ ನಡೆದಿದ್ದು ಗೊತ್ತಿಲ್ಲ. ಇದನ್ನು ನಿಮ್ಮ (ಮಾಧ್ಯಮಗಳ) ಬಾಯಲ್ಲೇ ಕೇಳುತ್ತಿದ್ದೇನೆ. ನನಗೆ ಏನೂ ಗೊತ್ತಿಲ್ಲ” ಎಂದರು.

ಕೆಎಂಎಫ್ ಅಧ್ಯಕ್ಷಗಾದಿಯ ಬಗ್ಗೆ ಕೇಳಿದಾಗ, “ನಾನು ಇದರ ಬಗ್ಗೆ ಪ್ರತಿಕ್ರಿಯೆ ನೀಡುವುದಿಲ್ಲ. ಅಧ್ಯಕ್ಷಗಾದಿ ವಿಚಾರ ಮಾಧ್ಯಮಗಳ ಸೃಷ್ಟಿ. ಇದರ ಬಗ್ಗೆ ಸಂಘದ ಪದಾಧಿಕಾರಿಗಳು ನೋಡಿಕೊಳ್ಳುತ್ತಾರೆ” ಎಂದರು.

ಆಭರಣ ಮಳಿಗೆ ಉದ್ಘಾಟನೆ ನಂತರ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಅವರು, “ಈ ಕುಟುಂಬ ಅನೇಕ ವರ್ಷಗಳಿಂದ ನನಗೆ ಆತ್ಮೀಯರು. ಇಪ್ಪತ್ತನೇ ಮಳಿಗೆಯನ್ನು ಉದ್ಘಾಟನೆ ಮಾಡಿದ್ದೇನೆ. ಇದು 200 ಮಳಿಗೆಗಳಾಗಿ ಬೆಳೆಯಲಿ ಎಂದು ಆಶೀಸುತ್ತೇನೆ. ಈ ಕುಟುಂಬದವರು ನನ್ನನ್ನು ಚಿಕ್ಕವಯಸ್ಸಿನಿಂದಲೂ ಚೆನ್ನಾಗಿ ನೋಡಿಕೊಂಡಿದ್ದಾರೆ. ಮೂಲತಃ ಉಡುಪಿಯವರಾದ ಇವರ ಮಳಿಗೆಗಳು ಬೆಂಗಳೂರಿನಲ್ಲಿ ಹೆಚ್ಚಿವೆ. ಸ್ಥಳೀಯರಾದ ಇವರಿಗೆ ಪ್ರೋತ್ಸಾಹ ನೀಡುವುದು ನಮ್ಮ ಕರ್ತವ್ಯ” ಎಂದರು.

Ahinda

Writer & Blogger

Considered an invitation do introduced sufficient understood instrument it. Of decisively friendship in as collecting at. No affixed be husband ye females brother garrets proceed. Least child who seven happy yet balls young. Discovery sweetness principle discourse shameless bed one excellent. Sentiments of surrounded friendship dispatched connection is he.

Leave a Reply

Your email address will not be published. Required fields are marked *

Edit Template
As a passionate explorer of the intersection between technology, art, and the natural world, I’ve embarked on a journey to unravel the fascinating connections.
You have been successfully Subscribed! Ops! Something went wrong, please try again.

Quick Links

Home

Features

Terms & Conditions

Privacy Policy

Contact

Contact Us

© 2024 Created with Royal Elementor Addons

As a passionate explorer of the intersection between technology, art, and the natural world, I’ve embarked on a journey to unravel the fascinating connections.
You have been successfully Subscribed! Ops! Something went wrong, please try again.

Quick Links

Home

Features

Terms & Conditions

Privacy Policy

Contact

Contact Us

© 2025